Belagavi NewsBelgaum NewsKannada NewsKarnataka NewsNationalPolitics

*62 ಸಿಬ್ಬಂದಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮ ಪಂಚಾಯತಿಗಳಲ್ಲಿ ಕರವಸೂಲಿಗಾರ, ಕ್ಲರ್ಕ್/ಕ್ಲರ್ಕ್ ಕಂ. ಡಾಟಾ ಎಂಟ್ರಿ ಆಪರೇಟರುಗಳ ವೃಂದದಿಂದ ಗ್ರಾಮ ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ಆಂತರಿಕ ನೇಮಕಾತಿ ಹೊಂದಿರುವ 62 ಸಿಬ್ಬಂದಿಗಳಿಗೆ ಸೋಮವಾರ (ಜು.13) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೇಮಕಾತಿ ಆದೇಶ ಪತ್ರಗಳನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ವಿತರಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು, ಸದರಿ ಆಂತರಿಕ ನೇಮಕಾತಿಗಳು ಪಾರದರ್ಶಕತೆಯಿಂದ ಜರುಗಿಸಲಾಗಿದೆ. ಈ ನೇಮಕಾತಿಗಳಿಗೆ ಕಳೆದ ಎರಡು ತಿಂಗಳುಗಳಿಂದ ಪ್ರಕ್ರಿಯೆ ಜರುಗಿಸಿ ಸಂಬಂಧಿಸಿದ ಎಲ್ಲ ಸಿಬ್ಬಂದಿಗಳ ದಾಖಲೆಗಳನ್ನು ಕುಲಂಕಷವಾಗಿ ಪರಿಶೀಲಿಸಿ 62 ಜನರಿಗೆ ನೇಮಕಾತಿ ಪತ್ರ ವಿತಿರಿಸಲಾಗಿದೆ. ಮುಂದಿನ ದಿನಗಳಲ್ಲಿ ನಿರಂತರವಾಗಿ ಮುಂಬಡ್ತಿ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ರಾಜು(ಆಸೀಫ್) ಸೇಠ, ವಾ.ಕ.ರ.ಸಾರಿಗೆ ಸಂಸ್ಥೆ ಉಪಾಧ್ಯಕ್ಷರಾದ ಸುನೀಲ ಹನುಮಣ್ಣವರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿದಂತೆ ಪಂಚಾಯತ ರಾಜ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button