Latest

ಬೆಳಗಾವಿಯಲ್ಲಿ ಶನಿವಾರ ಉದ್ಯೋಗ ಮೇಳ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಫೆ. ೧೬ ರಂದು ಬೆಳಗ್ಗೆ ೯.೩೦ ರಿಂದ ಮಧ್ಯಾಹ್ನ ೩.೩೦ ವರೆಗೆ ನಗರದ ಕ್ಲಬ್ ರಸ್ತೆಯ ಭಾವುರಾವ್‌ಕಾಕತ್ಕರ್ ಪದವಿ ಮಹಾವಿದ್ಯಾಲಯದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್.ಸಿ. ಉತ್ತೀರ್ಣ, ಪಿಯುಸಿ, ಐಟಿಐ, ಡಿಪ್ಲೋಮಾ, ಫಾರ್ಮಸಿ, ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಮೇಳದಲ್ಲಿ ವಿಕಲಚೇತನರಿಗೂ ಉದ್ಯೋಗಾವಕಾಶದ ಸೌಲಭ್ಯವಿದ್ದು, ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ಮೊ.೮೯೫೧೯೧೧೫೬೭, ೯೭೪೩೧೬೬೧೭೮ ಸಂಪರ್ಕಿಸಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದದ್ರ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button