*19.85 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಸತೀಶ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಾಕ್ಸೈಟ್ ರೋಡ್ ನಲ್ಲಿ ಹುನಮಾನ ನಗರ ಸರ್ಕಲ್‌ದಿಂದ ರಾಷ್ಟೀಯ ಹೆದ್ದಾರಿವರೆಗೂ 19.85 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಿಕಿಹೊಳಿ ಅವರು ಚಾಲನೆ ನೀಡಿದರು.
ಈ ವೇಳೆ ಸಚಿವ ಸತೀಶ ಜಾರಕಿಹೊಳಿ ಅವರು ಮಾತನಾಡಿ, ನಗರದಲ್ಲಿ ಬಹಳಷ್ಟು ರಸ್ತೆ ದುರಸ್ತಿ ಕಾಮಗಾರಿಗಳು ನಡೆಯಬೇಕಿದೆ. ಬಾಕ್ಸೈಟ್ ರೋಡ್ 4 ಕಿಲೋ ಮೀಟರ್ ವ್ಯಾಪ್ತಿಯ ಅಭಿವೃದ್ದಿ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ
ಬೆಳಗಾವಿ ಸೇರಿದಂತೆ ಎಲ್ಲಾ ಕ್ಷೇತ್ರದ ಕಾಮಗಾರಿಗೆ ವೇಗ ನೀಡಲಾಗುವುದು ಎಂದರು.
ಉತ್ತರ ಕ್ಷೇತ್ರದಲ್ಲಿ ಈಗಾಗಲೇ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಮುಂಬರುವ ದಿನಗಳಲ್ಲಿ ಎಲ್ಲಾ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಈ ಕ್ಷೇತ್ರದ ಶಾಸಕರು ಕ್ಷೇತ್ರದ ಅಭಿವೃದ್ಧಿಗಾಗಿ ಸತತ ಪ್ರಯತ್ನ ಮಾಡುತ್ತಿದ್ದಾರೆ. ಅವರ ಪ್ರಯತ್ನದಿಂದ ಬಹುಮತದ 19. 85 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಇನ್ನೂ ಹೆಚ್ಚಿನ ಕೆಲಸಗಳು ನಡೆಯಲಿವೆ. ಬೆಳಗಾವಿ ನಗರವನ್ನು ಬೆಳೆಸೋಣ ಅದಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ರಾಜ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಜೊತೆ ಕ್ಷೇತ್ರದ ವ್ಯಾಪ್ತಿಯ ಕಾಮಗಾರಿ ಬಹು ವೇಗ ನೀಡಲಾಗಿದೆ. ಶಾಸಕರ ಮನವಿಯಂತೆ ಜನರ ಕನಸಿನ ರಸ್ತೆ ಶೀಘ್ರದಲ್ಲೇ ಮುಗಿಯಲಿದೆ.
ಸಿಎಂ ಸಿದ್ದರಾಮಯ್ಯನವರ ಸರ್ಕಾರದ ಆಡಳಿತ ಅವಧಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಶಾಸಕ ರಾಜು(ಆಸೀಪ) ಸೇಠ ಮಾತನಾಡಿ, ಕ್ಷೇತ್ರದ ಜನತೆ ಬೇಡಿಕೆ ಈಡೇರಿದೆ ರಸ್ತೆಯ ಕಾಮಗಾರಿಗೆ ದುರಸ್ತಿ ಕಾರ್ಯಾರಂಭಕ್ಕೆ ಚಾಲನೆ ನೀಡಲಾಗಿದೆ. ನಮ್ಮ , ನಿಮ್ಮೆಲ್ಲರ ಪ್ರಯತ್ನಕ್ಕೆ ಸಚಿವರು ಅನುದಾನ ಬಿಡುಗಡೆ ಮಾಡಿ ಕ್ಷೇತ್ರದ ಅಭಿವೃದ್ದಿಗೆ ಸ್ಪಂಧಿಸಿದ್ದಾರೆ. ನಾಡಿನ ಅಭಿವೃದ್ಧಿ ಅವರ ಗುರಿಯಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಯ ಕಾರ್ಯಗಳು ನಿರಂತರವಾಗಿ ನಡೆಯಲಿದೆ ಎಂದ ಅವರು,
ಕ್ಷೇತ್ರದ ಪ್ರಗತಿಗಾಗಿ ಹೆಚ್ಚಿನ ಅನುದಾನ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಬಾಕಿ ಉಳಿದ ಕಾಮಗಾರಿಗೆ ಶೀಘ್ರವೆ ಚಾಲನೆ ನೀಡಲಾಗುವುದು. ಸಚಿವ ಸತೀಶ ಜಾರಕಿಹೊಳಿ ಅವರ ಅಮೃತಹಸ್ತದಿಂದ ವಿವಿಧ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ್ದಾರೆ. ಕ್ಷೇತ್ರದ ಜನರಿಗೆ ಸುಸಜ್ಜಿತ ರಸ್ತೆ ನಿರ್ಮಾಣವೇ ನಮ್ಮ ಗುರಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಎಸ್ ಎಸ್ ಸೊಬರದ, ಲೋಕೋಪಯೋಗಿ ಇಲಾಖೆ ಎಇಇ ಶಶಿಕಾಂತ್ ಕೋಲೆಕಾರ್ , ರಾಜೇಂದ್ರ, ಮೈದುದಿನ್ ಮುಲ್ಲಾ, ತರ್ಡೆ ಬ್ರದರ್ಸ್ ರಾಯಬಾಗ ಹಾಗೂ ಇತರರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ