Belagavi NewsBelgaum NewsKannada NewsKarnataka NewsNationalPolitics

*ಮಾಜಿ ಶಾಸಕ ಲಾವೋ ಮಾಮಲೇದಾರ್ ಸಾವು ದುಃಖಕರ ಎಂದ ಸಚಿವ ಸತೀಶ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೊಬ್ಬನಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ ಸಾವಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಹಿತಿ ತಿಳಿಸಿದ ಸಚಿವರು, ಜಿಲ್ಲಾಧಿಕಾರಿ, ಬೆಳಗಾವಿ ಪೊಲೀಸ್‌ ಕಮಿಷನರ್‌ ಅವರೊಂದಿಗೆ ಮಾತನಾಡಿದ್ದು, ಈ ಘಟನೆ ಬಗ್ಗೆ ವಿವರ ಪಡೆಯಲಾಗಿದೆ. ಮಾಜಿ ಶಾಸಕ ಲಾವೋ ಮಾಮಲೇದಾರ್ ಅವರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮಕ್ಕೆ ಕಳಿಸಲು ಸಕಲ ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Home add -Advt

ಇನ್ನು ಬೆಳಗಾವಿಯ ಬಿಮ್ಸ್‌ನಲ್ಲಿ ಮಾಜಿ ಶಾಸಕ ಲಾವೂ ಮಾಮಲೇದಾರ್ ಅವರ ಮೃತದೇಹ ಇರಿಸಲಾಗಿದ್ದು, ಬಿಮ್ಸ್‌ ಗೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಆಪ್ತ ಸಹಾಯಕರಾದ ಮಲಗೌಡ ಪಾಟೀಲ್‌ ಭೇಟಿ ನೀಡಿದ್ದು, ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.

ಸಂತಾಪ ಸೂಚಿಸಿದ ಸಚಿವರು: ಬೆಳಗಾವಿ ನಗರದಲ್ಲಿ ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ ಸಾವಿನ ಘಟನೆ ನಡೆದಿರುವುದು ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಅವರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ, ಅವರ ಕುಟುಂಬ ವರ್ಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.

Related Articles

Back to top button