
ಪ್ರಗತಿವಾಹಿನಿ ಸುದ್ದಿ, ದಾವಣಗೆರೆ – ದಾವಣಗೆರೆ ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ, ಕೇಂದ್ರ ಸರ್ಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮಂಜೂರಾದ 43 ಲಕ್ಷ ರೂ. ವೆಚ್ಚದ ನೂತನ “ಸಖಿ ಒನ್ ಸ್ಟಾಪ್ ಸೆಂಟರ್” ಕಟ್ಟಡವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಲೋಕಾರ್ಪಣೆಗೊಳಿಸಿದರು.

ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ದೌರ್ಜನ್ಯಕ್ಕೊಳಗಾದ ಮಹಿಳೆಯರು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಮಕ್ಕಳಿಗೆ ಇಲ್ಲಿ ಆಶ್ರಯ ನೀಡಲಾಗುತ್ತದೆ. ಇಂತಹ ನೊಂದ ಮಹಿಳೆಯರನ್ನು ಹಾಗೂ ಮಕ್ಕಳನ್ನು ಕೌನ್ಸಿಲಿಂಗ್ ಮಾಡಲಾಗುತ್ತದೆ ಹಾಗೂ ಅವರಿಗೆ ಕಾನೂನು, ಪೊಲೀಸ್ ಹಾಗೂ ವೈದ್ಯಕೀಯ ನೆರವು ನೀಡಲಾಗುತ್ತದೆ. ನೊಂದ ಮಹಿಳೆಯರ ಹಾಗೂ ಮಕ್ಕಳ ನೋವಿಗೆ ಸ್ಪಂದಿಸಲು ದಿನದ 24 ಗಂಟೆಯೂ ಈ ಸೆಂಟರ್ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ