Latest

ಸಚಿವ ಹೆಬ್ಬಾರ್ ವಿರುದ್ಧ 1 ರೂ.ಮಾನನಷ್ಟ ಪ್ರಕರಣ ದಾಖಲಿಸಿದ ನಟ ಚೇತನ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ ಸ್ಯಾಂಡಲ್ ವುಡ್ ನಟ ಚೇತನ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ನಟ ಚೇತನ್ ಹೇಳಿಕೆ ಖಂಡಿಸಿ ಸಚಿವ ಹೆಬ್ಬಾರ್ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದರು ಈ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿ ನಟ ಚೇತನ್ ಇದೀಗ ಕೋರ್ಟ್ ಮೆಟ್ಟಿಲೇರಿದ್ದು, ಸಚಿವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, 1 ರೂಪಾಯಿ ಪರಿಹಾರ ನೀಡಬೇಕು ಹಾಗೂ ಬೇಷರತ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಕರಣ ಸಂಬಂಧ ಸಿಟಿ ಸಿವಿಲ್ ಕೋರ್ಟ್ ಸಚಿವ ಶಿವರಾಮ್ ಹೆಬ್ಬಾರ್ ಅವರಿಗೆ ನೋಟೀಸ್ ನೀಡಿದ್ದು, ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ. ಬ್ರಾಹ್ಮಣ ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದ ನಟ ಚೇತನ್ ವಿರುದ್ಧ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ
ರಮೇಶ್ ಜಾರಕಿಹೊಳಿ ಪ್ರಕರಣದ ಸತ್ಯ ಸದ್ಯದಲ್ಲೆ ಬಹಿರಂಗ ; ಬಿ.ಸಿ.ಪಾಟೀಲ್

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button