ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಇಂದು ಸಚಿವರಾದ ಅಂಗಾರ್.ಎಸ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಭಾಗವಹಿಸಿದರು.
ಸಚಿವ ಶಿವರಾಮ ಹೆಬ್ಬಾರ್ ಅವರು ಉತ್ತರಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ಮಂಜೂರಾಗಿರುವ ಬಂದರುಗಳ ಕುರಿತು ಹಾಗೂ ಸ್ಥಳೀಯ ಮೀನುಗಾರರ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ವಿವರಿಸಿದರು, ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳ ಪುನರ್ನಿರ್ಮಾಣಕ್ಕೆ ಹಾಗೂ ಸಂತ್ರಸ್ತರಿಗೆ ಕೇಂದ್ರ ಸರಕಾರದಿಂದ ಯಾವುದೇ ಪರಿಹಾರ ಈವರೆಗೂ ಬಿಡುಗಡೆಯಾಗಿಲ್ಲ ಈ ಬಗ್ಗೆ ಮುಖ್ಯಮಂತ್ರಿಗಳನ್ನು ಸಚಿವರಾದ ಅಂಗಾರ್ ಎಸ್ ಅವರೊಂದಿಗೆ ಭೇಟಿಯಾಗಿ ಚರ್ಚಿಸುವುದಾಗಿ ತಿಳಿಸಿದರು.
ಜಿಲ್ಲೆಗೆ ಮಂಜೂರಾಗಿರುವ ಬಂದರುಗಳ ನಿರ್ಮಾಣದ ಕುರಿತು ಉಂಟಾಗಿರುವ ಸಮಸ್ಯೆ ಇತ್ಯರ್ಥಕ್ಕಾಗಿ ಮುಂದಿನ ದಿನದಲ್ಲಿ ಜಿಲ್ಲಾ ಕೇಂದ್ರದಲ್ಲಿ ಬಂದರು ಸಚಿವರು ಹಾಗೂ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.
ಜಿಲ್ಲೆಯ ಮಂಜೂರಿಯಾಗಿರುವ ಸಾಗರ ಮಾಲಾ ಯೋಜನೆ ಸಮಸ್ಯೆ ಕುರಿತು ಚರ್ಚಿಸಿದರು, ಕಾರವಾರದ ಸಾಗರ ಮಾಲಾ ಯೋಜನೆಯ ಸಮಸ್ಯೆ ಪರಿಹಾರವಾಗುತ್ತಿದೆ ಎಂದು ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಉತ್ತರಕನ್ನಡ ಶಾಸಕರಾದ ದಿನಕರ ಕೆ ಶೆಟ್ಟಿ, ಸುನೀಲ್ ನಾಯ್ಕ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ವಿಧಾನಪರಿಷತ ಸದಸ್ಯರು ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯೇಂದ್ರ ಸ್ಪರ್ಧೆ ವಿಚಾರ; ಮಾಜಿ ಸಿಎಂ ಬಿಎಸ್ ವೈ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ