Kannada NewsKarnataka NewsPolitics

*ಸಚಿವ ಶಿವರಾಜ್ ತಂಗಡಗಿ ಅವರಿಗೆ ಎದೆ ನೋವು: ಆಸ್ಪತ್ರೆಯ ಎಮರ್ಜೆನ್ಸಿಯಲ್ಲಿ ಚಿಕಿತ್ಸೆ*

ಪ್ರಗತಿವಾಹಿನಿ ಸುದ್ದಿ: ಸಚಿವ ಶಿವರಾಜ್ ತಂಗಡಗಿ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಪ್ಪಳದಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಕಾರು ಚಾಲಕ ಮತ್ತು ಗನ್ ಮ್ಯಾನ್ ನೆರವಿನಿಂದ ಅವರನ್ನು ತುಮಕೂರು ನಗರದ ಬಿ.ಹೆಚ್ ರಸ್ತೆಯಲ್ಲಿರುವ ಸಿದ್ದಗಂಗಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Home add -Advt

ಸದ್ಯ ಸಿದ್ದಗಂಗಾ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗಿದೆ. ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುತ್ತಿದ್ದು ಸದ್ಯ ಸಚಿವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಆಸ್ಪತ್ರೆಯಿಂದ ಡಿಶ್ಚಾರ್ಜ್‌ ಆಗಿದ್ದಾರೆ.

Related Articles

Back to top button