
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದ ಸಚಿವರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಇದೀಗ ಕೈಮಗ್ಗ ಹಾಗೂ ಜವಳಿ ಖಾತೆ ಸಚಿವ ಶ್ರೀಮಂತ ಪಾಟೀಲ್ ಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಸಚಿವರೇ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ತಮಗೆ ಕೊವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟೀವ್ ಬಂದಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲ. ಆದರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಗುಣಮುಖನಾಗಿ ಜನಸೇವೆಗೆ ವಾಪಸ್ ಆಗುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ಎರಡು ಮೂರು ದಿನಗಳಿಂದ ತಮ್ಮ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ