Latest

ಸಚಿವ ಶ್ರೀರಾಮುಲುಗೆ ಹೈಕಮಾಂಡ್ ಬುಲಾವ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಸಚಿವ ಶ್ರೀರಾಮುಲು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿರುವಾಗಲೇ ಸಚಿವ ಶ್ರೀರಾಮುಲು ಅವರಿಗೆ ಹೈಕಮಾಂದ್ ಬುಲಾವ್ ನೀಡಿದೆ. ವರಿಷ್ಠರ ಆಹ್ವಾನದ ಮೇರೆಗೆ ಇದೀಗ ಸಚಿವ ಶ್ರೀರಾಮುಲು ದೆಹಲಿಗೆ ಹೊರಟಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಶಾಸಕ ರೇಣುಕಾಚಾರ್ಯ ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ವರಿಷ್ಠರ ಭೇಟಿಗಾಗಿ ಕಾಯುತ್ತಿದ್ದು, ಇದೇ ವೇಳೆ ಶ್ರೀರಾಮುಲು ದಿಢೀರ್ ದೆಹಲಿಗೆ ಪ್ರಯಾಣಿಸಿರುವುದು ಕುತೂಹಲ ಇಮ್ಮಡಿಗೊಳಿಸಿದೆ.

ರೇಣುಕಾಚಾರ್ಯಗೆ ‘ಸಿಡಿ ಆತಂಕ’?; ದಿಢೀರ್ ದೆಹಲಿಗೆ ದೌಡಾಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ

Related Articles

Back to top button