
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸವದತ್ತಿ ತಾಲೂಕಿನ ಮುನವಳ್ಳಿಯ ನೇಕಾರ ಕುಟುಂಬದ ಸಾವಿತ್ರಿ ಹುಲ್ಲೂರ ಅವರ ಮನೆಗೆ ಭೇಟಿ ನೀಡಿದ ವಸತಿ ಸಚಿವ ಸೋಮಣ್ಣ ಅವರು ಮೂರು ವಿದ್ಯುತ್ ಮಗ್ಗಗಳು ಸಂಪೂರ್ಣ ಹಾನಿಗೊಳಾಗಿರುವುದನ್ನು ಪರಿಶೀಲಿಸಿದರು.

ಪ್ರತಿ ಮಗ್ಗಗಳಿಗೂ ತಲಾ ೨೫ ಸಾವಿರ ಪರಿಹಾರ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಚಿವ ಸೋಮಣ್ಣ ಭರವಸೆ ನೀಡಿದರು.
ಸವದತ್ತಿ ಶಾಸಕ ಆನಂದ ಮಾಮನಿ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ