Latest

ಉಪಮುಖ್ಯಮಂತ್ರಿ ಹುದ್ದೆ ಚರ್ಚೆ ಮತ್ತೆ ಮುನ್ನೆಲೆಗೆ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಆರೋಗ್ಯ ಸಚಿವ ಶ್ರೀರಾಮುಲು ಮತ್ತೆ ತಾವು ಡಿಸಿಎಂ ಹುದ್ದೆಯ ಆಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ಹೇಳಿದ್ದು, ಯಾವುದೇ ಸ್ಥಾನ ನೀಡಿದರು ನಿಭಾಯಿಸುವ ಶಕ್ತಿಯನ್ನು ಭಗವಂತ ಕೊಟ್ಟಿದ್ದಾನೆ ಎಂದು ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾವುದೇ ಸ್ಥಾನ ನೀಡಿದರೂ ನಿಭಾಯಿಸುವ ಶಕ್ತಿಯಿದೆ. ಪಕ್ಷ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡುತ್ತೇನೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ದೆಹಲಿಗೆ ತೆರಳುತ್ತಿದ್ದಾರೆ. ಹೈಕಮಾಂಡ್ ಹಾಗೂ ಪಕ್ಷದ ವರಿಷ್ಠರು ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರಿಸುತ್ತಾರೆ ಎಂದರು.

Home add -Advt

ವಿಪಕ್ಷ ನಾಯಕ ಸಿದ್ದರಾಮಯ್ಯ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಕಳಂಕ ತರುವ ಉದ್ದೇಶದಿಂದ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದರು.

ಇನ್ನು ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ. ಗೆಲುವಿಗಾಗಿ ಈಗಗಾಲೇ ತಂತ್ರ ರೂಪಿಸಲಾಗಿದ್ದು, ಚುನಾವಣಾ ಸಿದ್ಧತೆ ಭರದಿಂದ ಸಾಗಿದೆ ಎಂದು ತಿಳಿಸಿದರು.

Related Articles

Back to top button