ಪ್ರಗತಿವಾಹಿನಿ ಸುದ್ದಿ, ಭಟ್ಕಳ : ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಕಂದಾಯ ಸಚಿವ ಆರ್.ಆಶೋಕ ಅವರೊಂದಿಗೆ ಭೇಟಿ ನೀಡಿ ಹಾನಿಗೊಳಗಾದ ಮನೆ, ಬೋಟ್ ಹಾಗೂ ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿ, ಹಾನಿಗೊಳಗಾದವರ ಪಟ್ಟಿಯನ್ನು ಶೀಘ್ರವಾಗಿ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ತೌಕ್ತೆ ಚಂಡಮಾರುತದ ಅವಘಡದಿಂದ ಮೃತರಾದ ತಾಲೂಕಿನ ಲಕ್ಷ್ಮಣ ಈರಪ್ಪ ನಾಯ್ಕ ಅವರ ಕುಟುಂಬದವರಿಗೆ ಸುಮಾರು 5 ಲಕ್ಷ ರೂಪಾಯಿ ಮೊತ್ತದ ಪರಿಹಾರ ಧನದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಸುನೀಲ್ ನಾಯ್ಕ, ದಿನಕರ ಕೆ ಶೆಟ್ಟಿ, ರೂಪಾಲಿ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷರಾದ ವೆಂಕಟೇಶ ನಾಯಕ ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಸೋಂಕಿತರಿಗಿಂತ ಡಿಸ್ಚಾರ್ಜ್ ಡಬಲ್; ಬೆಳಗಾವಿಯಲ್ಲಿ 2 ಸಾವಿರ ದಾಟಿತು ಸೋಂಕಿತರ ಸಂಖ್ಯೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ