*ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ದಿಢೀರ್ ದೆಹಲಿಗೆ ತೆರಳಿದ ಸಚಿವರು, ಶಾಸಕರು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಸಚಿವರು, ಶಾಸಕರು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ ಬೆನ್ನಲ್ಲೆ ಇದೀಗ ಸಚಿವರು, ಶಾಸಕರು ದೆಹಲಿಗೆ ಭೇಟಿ ನೀಡಿದ್ದು, ಕುತೂಹಲ ಕೆರಳಿಸಿದೆ.
ಸಚಿವ ಚಲುವರಾಯಸ್ವಾಮಿ, ಶಾಸಕರಾದ ಮಾಗಡಿ ಬಾಲಕೃಷ್ಣ, ಗುಬ್ಬಿ ಶ್ರೀನಿವಾಸ್, ಟಿ.ಡಿ.ರಾಜೇಗೌಡ ದೆಹಲಿಗೆ ಪ್ರಯಾಣಿಸಿದ್ದಾರೆ. ಒಕ್ಕಲಿಗ ಸಮುದಾಯದ ನಾಯಕರಿಂದಲೇ ದೆಹಲಿ ಭೇಟಿ ಆರಂಭವಾಗಿದ್ದು, ನಾಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿಗೆ ಸಮಯ ನಿಗದಿಯಾಗಿದೆ. ನಾಳೆ ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿತ ಮತ್ತೊಂದು ತಂಡ ದೆಹಲಿಗೆ ಪ್ರಯಾಣಿಸಲಿದೆ ಎಂದು ತಿಳಿದುಬಂದಿದೆ. ಒಟ್ಟಾರೆ ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ, ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನಾರಚನೆ ಚರ್ಚೆ ಜೋರಾಗಿರುವಾಗಲೇ ಕಾಂಗ್ರೆಸ್ ನಾಯಕರ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.



