Kannada NewsKarnataka NewsNationalPolitics
*ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದತಿ ಪ್ರಕ್ರಿಯೆ ಆರಂಭಿಸಿದ ವಿದೇಶಾಂಗ ಸಚಿವಾಲಯ*
ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳಿಂದ ತಿಳಿದು ಬಂದಿದೆ.
ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಕೋರಿ ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 2ನೇ ಬಾರಿ ಪತ್ರ ಬರೆದಿದ್ದರು. ಅಲ್ಲದೆ, ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸುವಂತೆಯೂ ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ ಎಂದು ತಿಳಿದುಬಂದಿದೆ.
ಕರ್ನಾಟಕ ಸರ್ಕಾರದ ಮನವಿಯ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಎಸ್‌ಐಟಿಯಿಂದ ಪಾಸ್‌ಪೋರ್ಟ್ ರದ್ದತಿ ಮನವಿ ಬಂದಿದೆ. ಹೀಗಾಗಿ ಪಾಸ್‌ಪೋರ್ಟ್ ರದ್ದತಿಗೆ ಕ್ರಮ ಕೈಗೊಳ್ಳಲಾಗುವುದು. ಕೆಲವೊಂದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ