*ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದ ಹೊರವಲಯದಲ್ಲಿರುವ ರೆಸಾರ್ಟ್‌ನಲ್ಲಿ ಇಬ್ಬರು ಅಪ್ತಾಪ್ತ ಬಾಲಕರು 15 ವರ್ಷದ ಬಾಲಕಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿರುವ ಘಟನೆ ಬೆಳಕಿಗೆ ಬಂದಿದೆ.
ಹತ್ತು ದಿನಗಳ ಹಿಂದೆ ನಡೆದ ಘಟನೆ ಇದಾಗಿದ್ದು, ಮನೆಗೆ ಬಾಲಕಿ ವಾಪಾಸ್ ಆದಾಗ ಹೊಟ್ಟೆ ನೋವು ಎಂದಿದ್ದಳು. ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಮಗನೊಬ್ಬ ಶಾಮಿಲಾಗಿದ್ದಾನೆ. ಅವನನ್ನು ಹೊರತು ಪಡಿಸಿ ಇಬ್ಬರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.
ಸಾಕೀಬ್ ಎಂಬಾತ ತನ್ನ ಹೆಸರಲ್ಲಿ ರೂಮ್ ಬುಕ್ ಮಾಡಿದ್ದ. ಬಾಲಕಿಯ ಸ್ನೇಹಿತ ಅಪ್ರಾಪ್ತ ಆಕೆಯನ್ನ ಕರೆದುಕೊಂಡು ಹೋಗಿದ್ದ. ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಸಾಕೀಬ್ ಹಾಗೂ ಮತ್ತೊಬ್ಬ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ. ಮತ್ತೋರ್ವ ಅಪ್ರಾಪ್ತ ಬಾಲಕನಿಗೆ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



