
ಪ್ರಗತಿವಾಹಿನಿ ಸುದ್ದಿ: ಮಧ್ಯಪ್ರದೇಶದ ಶಿವಪುರಿಯಲ್ಲಿ ಸೇನಾ ಯುದ್ಧ ವಿಮಾನ ಮಿರಾಜ್ 2000 ಫೈಟರ್ ಜೆಟ್ ಪತನಗೊಂಡಿದ್ದು ಇಬ್ಬರು ಪೈಲೆಟ್ ಗಳು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಇಬ್ಬರೂ ಪೈಲಟ್‌ಗಳು ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಭಾರತೀಯ ವಾಯುಸೇನೆಗೆ ಸೇರಿದ ಯುದ್ಧ ವಿಮಾನ ನಿಯಂತ್ರಣ ತಪ್ಪುತ್ತಿದ್ದಂತೆಯೇ ವಸತಿ ಪ್ರದೇಶದಲ್ಲಿ ನೆಲಕ್ಕಪ್ಪಳಿಸುವುದನ್ನು ತಡೆಯುವಲ್ಲಿ ಪೈಲಟ್ ಯಶಸ್ವಿಯಾಗಿದ್ದಾರೆ. ಇನ್ನು ಘಟನೆಯ ಬಗ್ಗೆ ಸುದ್ದಿ ಹಬ್ಬುತ್ತಿದ್ದಂತೆಯೇ ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ಸ್ಥಳಕ್ಕೆ ಬಂದರು. ಪೈಲಟ್‌ಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಯುದ್ಧ ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ