Belagavi NewsBelgaum NewsKarnataka News

*ಕುರಾನ್ ಪುಸ್ತಕ ಸುಟ್ಟ ಕಿಡಗೇಡಿಗಳು: ಪ್ರತಿಭಟನೆ, ಬಿಗುವಿನ ವಾತಾವರಣ ನಿರ್ಮಾಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿಯಲ್ಲಿ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಪವಿತ್ರ ಕುರಾನ್ ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಿಂದ ಮುಸ್ಲಿಂರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಎಂಬ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.ಈ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ.

ಈ ಮಸೀದಿಯಲ್ಲಿ ಎಂದಿನಂತೆ ಇಂದು (ಮೇ 12) ಪ್ರಾರ್ಥನೆ ಮಾಡಲು ಮುಸಲ್ಮಾನರು ಆಗಮಿಸಿದ ವೇಳೆ ಕುರಾನ್, ಹದೀಸ್ ನಾಪತ್ತೆಯಾಗಿರುವುದನ್ನು ಗಮನಿಸಿದ್ದಾರೆ. ಹೀಗಾಗಿ ಪ್ರಾರ್ಥನೆ ಮುಗಿದ ಬಳಿಕ ಸುತ್ತಮುತ್ತ ಹುಡುಕಾಟ ನಡೆಸಿದಾಗ ಕುರಾನ್ ಮತ್ತು ಹದೀಸ್ ಸುಟ್ಟು ಹಾಕಿರುವುದು ಬೆಳಕಿಗೆ ಬಂದಿದೆ.

ಈ ಘಟನೆಯಿಂದಾಗಿ ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಘಟನೆ ಬಗ್ಗೆ ಎಲ್ಲಡೆ ಸುದ್ದಿ ತಿಳಿಯುತ್ತಿದ್ದಂತೆ ಘಟನೆ ಖಂಡಿಸಿ ಬೆಳಗಾವಿ ನಗರದಲ್ಲಿ ಸಾವಿರಾರು ಮುಸ್ಲಿಂ ಮುಖಂಡರು, ಯುವಕರು ಬೃಹತ್ ಪ್ರತಿಭಟನೆ ನಡೆಸಿದರು. 

Home add -Advt

ಸಾವಿರಾರು ಯುವಕರು ಚೆನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.  ಅಷ್ಟರಲ್ಲೇ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ , ಶಾಸಕ ರಾಜು ಸೇಠ್ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರೊಂದಿಗೆ ಚರ್ಚಿಸಿದ ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಈ ವೇಳೆ ಪೊಲೀಸರು ಮೂರು ದಿನದಲ್ಲೇ ಆರೋಪಿಗಳನ್ನು ಬಂದಿಸುತ್ತೇವೆ ಸಮಯ ನೀಡಿ ಎಂದು ಪ್ರತಿಭಟನಾಕಾರರರಿಗೆ ಭರವಸೆ ನೀಡಿದರು. 

https://pragativahini.com/ಪಾಕಿಸ್ತಾನಕ್ಕೆ-ನೇರ-ಎಚ್ಚರ

Related Articles

Back to top button