*ಎಣ್ಣೆ ಏಟಲ್ಲಿ ರೈಲಿನ ಚೈನ್ ಎಳೆದ ಕಿಡಿಗೇಡಿಗಳು*

ಪ್ರಗತಿವಾಹಿನಿ ಸುದ್ದಿ : ಕುಡಿದ ಮತ್ತಿನಲ್ಲಿದ್ದ ಮೂವರು ಕಿಡಿಗೇಡಿಗಳು ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಯಶವಂತಪುರ-ವಾಸ್ಕೋಡಗಾಮ ರೈಲಿನ ಚೈನ್ ಎಳೆದಿದ್ದಾರೆ. ಇದನ್ನು ಗಮನಿಸಿದ ಆರ್‌ಪಿಎಫ್ ಸಿಬ್ಬಂದಿ ಪ್ರಶ್ನೆ ಮಾಡಿದರು. ಈ ವೇಳೆ ಪುಂಡರು ಆರ್‌ಪಿಎಫ್ ಸಿಬ್ಬಂದಿಯನ್ನು ತಳ್ಳಿ, ಹಲ್ಲೆ ಮಾಡಿದ್ದಾರೆ. ಕೂಡಲೇ ಹೆಚ್ಚಿನ ಆರ್‌ಪಿಎಫ್ ಸಿಬ್ಬಂದಿ ಸ್ಥಳಕ್ಕೆ ಬಂದು ಮೂವರು ಕಿಡಿಗೇಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಯಶವಂತಪುರ ರೈಲ್ವೆ ಠಾಣೆಯಲ್ಲಿ ಆರ್‌ಪಿಎಫ್ ಸಿಬ್ಬಂದಿ ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ. ರೈಲಿನ ಚೈನ್ ಎಳೆದು, ರೈಲ್ವೆ ಪೊಲೀಸರ ಮೇಲೆ ಹಲ್ಲೆ ನಡೆಸಿ … Continue reading *ಎಣ್ಣೆ ಏಟಲ್ಲಿ ರೈಲಿನ ಚೈನ್ ಎಳೆದ ಕಿಡಿಗೇಡಿಗಳು*