Latest

ಮೂತ್ರ ವಿಸರ್ಜನೆಗೆ ಹೋದಾಗಲೇ ದಾಳಿ; ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಬಿಜೆಪಿ ಮುಖಂಡ, ಭಜರಂಗದಳ ಕಾರ್ಯಕರ್ತ ಕಾಂತರಾಜು ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ನಡೆದಿದೆ.

ನಿನ್ನೆ ರಾತ್ರಿ ಮೂತ್ರ ವಿಸರ್ಜನೆಗೆಂದು ಮನೆಯಿಂದ ಹೊರಬಂದ ಕಾಂತರಾಜು ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಕಾಂತರಾಜು ರಕ್ಷಣೆಗಾಗಿ ಕೂಗುತ್ತಿದ್ದಂತೆ ಕುಟುಂಬದವರು ಹೊರ ಬಂದಿದ್ದಾರೆ. ತಕ್ಷಣ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

Home add -Advt

ಗಂಭೀರವಾಗಿ ಗಾಯಗೊಂಡಿರುವ ಕಾಂತರಾಜು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ಯಕೋಮಿನ ಯುವಕರಿಂದ ಈ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ.

ನಿನ್ನೆ ರಾಜೀವ್ ಗಾಂಧಿ ಬಡಾವಣೆಯಲ್ಲಿ ಎರಡು ಕೋಮಿನ ನಡುವೆ ಗಲಾಟೆ ನಡೆದು ಕಲ್ಲುತೂರಾಟ ನಡೆದಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಹಲ್ಲೆ ಪ್ರಕರಣ ನಡೆದಿದೆ ಎಂದು ಹೇಳಲಾಗುತ್ತಿದೆ.
ಪ್ರವಾಹ ಭೀತಿ; ರೆಡ್ ಅಲರ್ಟ್ ಘೋಷಣೆ; ಶಾಲಾ-ಕಾಲೇಜುಗಳಿಗೆ ರಜೆ

Related Articles

Back to top button