Latest

ಬಾಬಾ ರಾಮ್ ದೇವ್ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಿ; ಪ್ರಧಾನಿಗೆ ಪತ್ರ ಬರೆದ ಐಎಂಎ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಲಸಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಪತಂಜಲಿ ಮುಖ್ಯಸ್ಥ ಬಾಬಾ ರಾಮ್ ದೇವ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದೆ.

ಕೋವಿಡ್ ಲಸಿಕೆ ಪಡೆದ 10,000 ವೈದ್ಯರು ಸಾವನ್ನಪ್ಪಿದ್ದಾರೆ. ಅಲೋಪಥಿ ಔಷಧಗಳನ್ನು ಪಡೆಯುತ್ತಿರುವ ಲಕ್ಷಾಂತರ ಜನರು ಇಂದು ಮೃತಪಡುತ್ತಿದ್ದಾರೆ ಎಂದು ಯೋಗಗುರು ಬಾಬಾ ರಾಮ್ ದೇವ್ ಹೇಳಿಕೆ ನೀಡಿದ್ದರು. ಅಲೋಪಥಿ ವೈದ್ಯಕೀಯ ಪದ್ಧತಿ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಾಬಾ ರಾಮ್ ದೇವ್ ಕ್ಷಮೆಯಾಚಿಸಬೇಕು ಹಾಗೂ 1,000 ಕೋಟಿ ರೂಪಾಯಿ ಮಾನನಷ್ಟ ಮೊಖದ್ದಮೆ ಪಾವತಿಸಬೇಕು ಎಂದು ಐಎಂಎ ಉತ್ತರಾಖಂಡ ಘಟಕ ನೋಟೀಸ್ ನೀಡಿತ್ತು.

ಇದರ ಬೆನ್ನಲ್ಲೇ ಈಗ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಐಎಂಎ, ಕೋವಿಡ್ ಲಸಿಕೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಾಬಾ ರಾಮ್ ದೇವ್ ವಿರುದ್ಧ ಕೇಸ್ ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಮೊದಲ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದ ವ್ಯಕ್ತಿ ಸಾವು

Home add -Advt

Related Articles

Back to top button