Film & EntertainmentKannada NewsKarnataka NewsLife StyleNational

*ಮಿಸ್‌ ಪುದುಚೇರಿ ಹಾಗೂ ಮಾಡೆಲ್ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಲಂಡನ್, ಜರ್ಮನಿ, ಮತ್ತು ಫ್ರಾನ್ಸ್ ನಂತಹ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಸ್ಯಾನ್ ರೆಚಲ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ವರ್ಷದ ಮಿಸ್‌ ಪುದುಚೇರಿ ಪ್ರಶಸ್ತಿ ಪುರಸ್ಕೃತೆ, ಮಾಡೆಲ್ ಮತ್ತು ಸೋಶಿಯಲ್ ಮೀಡಿಯಾ ಸ್ಟಾರ್ ಸ್ಯಾನ್ ರೆಚಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುದುಚೇರಿಯಲ್ಲಿ ಈ ಘಟನೆ ನಡೆದಿದೆ.

26 ವರ್ಷದ ಸ್ಯಾನ್ ರೆಚಲ್ ಅವರು ತಮ್ಮ ತಂದೆಯ ಮನೆಗೆ ಭೇಟಿ ನೀಡಿದ್ದ ವೇಳೆ ಹೆಚ್ಚು ಮಾತ್ರೆಗಳನ್ನು ಸೇವಿಸಿದ್ದಾಗಿ ತಿಳಿದುಬಂದಿದೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ಯಾನ್ ರೆಚಲ್ ಸಾವನ್ನಪ್ಪಿದ್ದಾರೆ.

ಆತ್ಮಹತ್ಯೆಗೂ ಮುನ್ನ ಸ್ಯಾನ್ ರೆಚಲ್ ಡೆತ್ ನೋಟ್‌ನಲ್ಲಿ ಆಕೆಯ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಾರೆ. ಸದ್ಯ ಡೆತ್ ನೋಟ್ ವಶಪಡಿಸಿಕೊಂಡ ಪೊಲೀಸರು ಆಕೆಯ ವೈವಾಹಿಕ ಜೀವನದ ಬಗ್ಗೆಯೂ ತನಿಖೆ ಮಾಡುತ್ತಿದ್ದಾರೆ. ಆರ್ಥಿಕ ಒತ್ತಡ ಮತ್ತು ವೈಯಕ್ತಿಕ ಒತ್ತಡ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Home add -Advt

Related Articles

Back to top button