Karnataka NewsLatest

*ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯ ಎದೆ ಮುಟ್ಟಿ ಅಸಭ್ಯ ವರ್ತನೆ; ಕಾಮುಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿಯ ಎದೆಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಸವರಾಜ್ (28) ಬಂಧಿತ ಆರೋಪಿ. ಜುಲೈ 30 ರಂದು ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ರಸ್ತೆ ಬದಿ ನಡೆದು ಹೋಗುತ್ತಿದ್ದಳು. ಏಕಾಏಕಿ ಬಂದ ಆರೋಪಿ ಬಸವರಾಜ್ ವಿದ್ಯಾರ್ಥಿನಿಯ ಎದೆಭಾಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ವಿದ್ಯಾರ್ಥಿನಿ ಕಿರುಚಾಡುತ್ತಿದ್ದಂತೆ ಬೈಕ್ ಹತ್ತಿ ಎಸ್ಕೇಪ್ ಆಗಿದ್ದಾನೆ.

ವಿದ್ಯಾರ್ಥಿನಿ ಘಟನೆ ಬಗ್ಗೆ ಸೋಲದೇವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಇದೀಗ ಕಲಬುರ್ಗಿ ಜಿಲ್ಲೆಯ ಜೇವರ್ಗಿ ಮೂಲದ ಆರೋಪಿ ಬಸವರಾಜ್ ನನ್ನು ಬಂಧಿಸಿದ್ದಾರೆ.

ಬಸವರಾಜ್, ಚಿಕ್ಕಬಾಣಾವರದಲ್ಲಿ ವಾಸವಾಅಗಿದ್ದ. ಸೋಲದೇವನಹಳ್ಲಿ ವ್ಯಾಪ್ತಿಯಲ್ಲಿ ಅಪೋಲೋ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ. ಸದ್ಯ ಆರೋಪಿ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button