*‍ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳ ಶವ ಪತ್ತೆ*: *ಶಸ್ತ್ರಾಸ್ತ್ರಗಳು ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಒಂದು ದಿನದ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳ ಮೃತದೇಹ ಗುಂಡೇಟಿನ ಗಾಯಗಳೊಂದಿಗೆ ಪತ್ತೆಯಾಗಿವೆ. ಅವರ ಬಳಿಯಿದ್ದ ಸೇವಾ ಶಸ್ತ್ರಾಸ್ತ್ರಗಳು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ದಚ್ಚನ್ ಪ್ರದೇಶದ ಕಿಯಾರ್ ಗ್ರಾಮದ ನಿವಾಸಿಗಳಾದ ಬಾಬಿ ಚಂದ್ (57) ಮತ್ತು ರಾಶ್ಪಾಲ್ ಕುಮಾರ್ (45) ಎಂದು ಗುರುತಿಸಲಾಗಿದೆ. ಇಬ್ಬರೂ ಕಿಶ್ತ್ವಾರ್ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನ (SOG) ಸದಸ್ಯರಾಗಿದ್ದು, ಕಿಯಾರ್ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಧಿಕಾರಿಗಳ … Continue reading *‍ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳ ಶವ ಪತ್ತೆ*: *ಶಸ್ತ್ರಾಸ್ತ್ರಗಳು ನಾಪತ್ತೆ*