
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕಿ ಮಿಥಾಲಿ ರಾಜ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
ಟೀಂ ಇಂಡಿಯಾ ಪರ 23 ವರ್ಷಗಳ ಕಾಲ ಕ್ರಿಕೆಟ್ ಆಡಿದ್ದ ಮಿಥಾಲಿ ರಾಜ್ ಹಲವು ವಿಶ್ವ ದಾಖಲೆ ಬರೆದಿದ್ದಾರೆ. ಭಾರತದ ಪರ 232 ಏಕದಿನ ಪಂದ್ಯಗಳನ್ನು ಆಡಿರುವ ಮಿಥಾಲಿ ರಾಜ್ 50.68 ಸರಾಸರಿಯಲ್ಲಿ 7805 ರನ್ ಗಳಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಗಳಿಸಿದ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿಶ್ವದ ಅತ್ಯುತ್ತಮ ಮಹಿಳಾ ಕ್ರಿಕೆಟಿಗರಲ್ಲಿ ಒಬ್ಬರು.
ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿರುವ ಮಿಥಾಲಿರಾಜ್, ನಾನು ನೀಲಿ ಜರ್ಸಿ ಧರಿಸಿ ನನ್ನ ದೇಶವನ್ನು ಪ್ರತಿನಿಧಿಸಿದಾಗ ಚಿಕ್ಕ ಮಗು ಎಂದು ತಮ್ಮ ಟ್ವಿಟರ್ ನಲ್ಲಿ ಬರೆದಿದದರೆ. ಈ ಪ್ರಯಾಣವು ಎಲ್ಲಾ ರೀತಿಯ ಕ್ಷಣಗಳನ್ನು ನೋಡುವಷ್ಟು ದೀರ್ಘವಾಗಿತ್ತು. ಕಳೆದ 23 ವರ್ಷಗಳು ನನ್ನ ಜೀವನ ಅತ್ಯುತ್ತಮ ಕ್ಷಣಗಳಲ್ಲಿ ಒಂದಾಗಿದೆ. ಪ್ರತಿ ಪ್ರಯಾಣದಂತೆ ಈ ಪ್ರಯಾಣವು ಕೊನೆಗೊಳ್ಳುತ್ತಿದೆ ಹಾಗೂ ಇಂದು ನಾನು ಎಲ್ಲಾ ರೀತಿಯ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದೇನೆ ಎಂದು ತಿಳಿಸಿದ್ದಾರೆ.
ರಾಷ್ಟ್ರ ನಿರ್ಮಾಣದಲ್ಲಿ ಸ್ಥಳೀಯ ಸಂಸ್ಥೆಗಳ ಪಾತ್ರ ಅತ್ಯಂತ ಪ್ರಮುಖ – ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ