ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟವಾಗಿದೆ.
ಚಿತ್ರರಂಗದ ಅತ್ಯುತ್ತಮ ಸಾಧನೆಗಾಗಿ ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಮಿಥುನ್ ಚಕ್ರವರ್ತಿ ಅವರಿಗೆ ಘೋಷಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಈ ಕುರುತು ಘೋಷಣೆ ಮಾಡಿದ್ದಾರೆ.
ಮಿಥುನ್ ಚಕ್ರವರ್ತಿ ಅವರ ಸಿನಿ ಜರ್ನಿ ನಿಜಕ್ಕೂ ಹಲವು ತಲೆಮಾರುಗಳಿಗೆ ಸ್ಫೂರ್ತಿ. ದಾದಾಸಾಹೇಬ್ ಫಾಲ್ಕೆ ಆಯ್ಕೆ ಸಮಿತಿ ಮಿಥುನ್ ಚಕ್ರವರ್ತಿ ಅವರಿಗೆ ಈ ಪ್ರಶಸ್ತಿ ನೀಡಲು ನಿರ್ಧರಿಸಿದೆ. ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಆಧರಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
70ನೇ ರಾಷ್ಟ್ರೀಯ ಫಿಲ್ಮ್ ಅವಾರ್ಡ್ ಕಾರ್ಯಕ್ರಮ ಅಕ್ಟೋಬರ್ 8ರಂದು ನಡೆಯಲಿದೆ. ಅಂದು ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.
ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟವಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮಿಥುನ್ ಚಕ್ರವರ್ತಿ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ