
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಡಿಸಿಪಿಯಾಗಿದ್ದ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ಜಿ.ಕೆ.ಮಿಥುನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಸೀಮಾ ಲಾಟ್ಕರ್ ಸುಮಾರು 2 ವರ್ಷದಿಂದ ಬೆಳಗಾವಿ ಡಿಸಿಪಿಯಾಗಿದ್ದರು. ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಈ ಮೊದಲು ಸಿಮಿ ಮರಿಯಂ ಜಾರ್ಜ್ ಅವರನ್ನು ವರ್ಗಾಯಿಸಲಾಗಿತ್ತು. ಆದರೆ ಇದೀಗ ವರ್ಗಾವಣೆಯಲ್ಲಿ ಮಾರ್ಪಾಡು ಮಾಡಲಾಗಿದ್ದು, ಸಿಮಿ ಮರಿಯಂ ಜಾರ್ಜ್ ಅವರನ್ನು ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾಯಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ