ಪ್ರಗತಿವಾಹಿನಿ ಸುದ್ದಿ; ಉಡುಪಿ: ಮೂಡಬಿದರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಿಥುನ್ ರೈ ಅವರು ನೀಡಿರುವ ಹೇಳಿಕೆಯೊಂದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಉಡುಪಿ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಎಂಬ ಹೇಳಿಕೆ ನೀಡಿದ್ದು, ಮಿಥುನ್ ರೈ ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಮೂಡಬಿದ್ರೆಯ ಪುತ್ತಿಗೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಿಥುನ್ ರೈ, ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಎಂದು ಹೇಳಿದ್ದಾರೆ. ತಮ್ಮ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ತಾನು ಸೌಹಾರ್ದಯುತವಾಗಿ ಹೇಳಿದ್ದೇನೆ. ಪತ್ರಿಕೆಗಳಲ್ಲಿ ಬಂದಿದ್ದ ವರದಿ ನೋಡಿ ಹೇಳಿದ್ದೆನೆ ಹೊರತು ವಿವಾದ ಮಾಡಬೇಕು ಎಂದಲ್ಲ ಎಂದು ತಿಳಿಸಿದ್ದಾರೆ.
ಮಿಥುನ್ ರೈ ಹೇಳಿಕೆಗೆ ಕಿಡಿ ಕಾರಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಚುನಾವಣೆ ಸಂದರ್ಭದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಈ ಮುಲಕ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಮಿಥುನ್ ರೈ ಹಿಂದೂಗಳಿಗೆ ಅವಮಾನ ಮಾಡುತ್ತಿದ್ದಾರೆ. ತಕ್ಷಣ ಕ್ಷಮೆಯಾಚನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ