
ಪ್ರಗತಿವಾಹಿನಿ ಸುದ್ದಿ; ಹಾಸನ: ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನದ ಕುವೆಂಪು ನಗರದಲ್ಲಿ ನಡೆದಿದೆ.
ಸ್ಫೋಟದ ತೀವ್ರತೆಗೆ ಅಂಗಡಿಯ ಗಾಜುಗಳು ಪುಡಿ, ಪುಡಿಯಾಗಿದ್ದು, ವ್ಯಕ್ತಿಯೀರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೊರಿಯರ್ ಕಚೇರಿಯಲ್ಲಿದ್ದ ಶಶಿ ಗಾಯಾಳು.
ಘಟನಾಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಿಕ್ಸಿ ಸ್ಫೋಟ ಹಿನ್ನೆಲೆಯಲ್ಲಿ ಘಟನಾಸ್ಥಳದ ಸುತ್ತಮುತ್ತಲಿನ ಅಂಗಡಿಗಳನ್ನು ಬಂದ್ ಮಾಡಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಯಾರೂ ಪ್ರವೇಶಿಸಿಸದಂತೆ ಬ್ಯಾರಿಕೇಡ್ ಗಳನ್ನು ಅಳವಡಿಸಿದ್ದಾರೆ.
ತೀವ್ರ ವಿಚಾರಣೆ ಬಳಿಕ ಇದೀಗ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಆಂತರಿಕ ಭದ್ರತಾ ಅಧಿಕಾರಿಗಳು ಭೇಟಿ ನೀಡಿದ್ದಾರೆ.
*ಫಾರ್ಮಾ ಲ್ಯಾಬ್ ನಲ್ಲಿ ಬೆಂಕಿ ದುರಂತ; ನಾಲ್ವರ ಸಜೀವ ದಹನ*
https://pragati.taskdun.com/andrapradeshafire-accidentfarma-compeny-lab4-death/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ