*ಎಂ.ಕೆ ಹೆಗಡೆ, ಕೆ.ವಿ.ಪ್ರಭಾಕರ್ ಸೇರಿದಂತೆ ಮಾಧ್ಯಮ ಸಲಹೆಗಾರರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ*

ಪತ್ರಕರ್ತರು ತಮ್ಮ ಮತ್ತು ಕುಟುಂಬದ ಕಾಳಜಿ ವಹಿಸಿ: ಕೆ.ವಿ.ಪ್ರಭಾಕರ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪತ್ರಕರ್ತರು ಒತ್ತಡದ ಬದುಕಿನಿಂದ ಹೊರ ಬಂದು ತಮ್ಮ ಮತ್ತು ಕುಟುಂಬದ ಆರೋಗ್ಯದ ಕಡೆ ಕಾಳಜಿ ವಹಿಸಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಳಗಾವಿ ಘಟಕ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಪತ್ರಕರ್ತರ ಸಮುದಾಯದ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿದೆ. ಮಾಸಾಶನ ಹೆಚ್ಚಳ ಸೇರಿ ಹಲವು ಬೇಡಿಕೆಗಳನ್ನು ಈ ಬಾರಿಯ ಬಜೆಟ್ ನಲ್ಲಿ ಈಡೇರಿಸಲಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ನೀಡಬೇಕು ಎನ್ನುವ ಬೇಡಿಕೆ ಕುರಿತಾಗಿ ಇಲಾಖೆಯಿಂದ ಒಂದು ಪ್ರಸ್ತಾವನೆಯನ್ನು ತರಿಸಿಕೊಳ್ಳಲಾಗಿದೆ. ಮುಂದಿನ ಬಜೆಟ್ ನಲ್ಲಿ ಈ ಬೇಡಿಕೆಗೆ ಸ್ಪಂದಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಇದೇ ವೇಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮಾಧ್ಯಮ ಸಲಹೆಗಾರ ಎಂ.ಕೆ.ಹೆಗಡೆ ಅವರನ್ನು ಸಹ ಸನ್ಮಾನಿಸಲಾಯಿತು.
ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಗದಗ ಡಂಬಳ ತೋಂಟದಾರ್ಯ ಮಠದ ಶ್ರೀ ಡಾ. ಸಿದ್ದರಾಮ ಸ್ವಾಮೀಜಿ, ಎಸ್ಪಿ ಡಾ. ಭೀಮಾಶಂಕರ ಗುಳೇದ, ಶಾಸಕ ರಾಜು ಸೇಠ್, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಜಿಲ್ಲಾಧ್ಯಕ್ಷ ದಿಲೀಪ ಕುರಂದವಾಡೆ, ವಾರ್ತಾ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ, ಮಹಾನಗರ ಪಾಲಿಕೆ ಕಮಿಷ್ನರ್ ಅಶೋಕ ದುಡಗುಂಟಿ, ಸರ್ವೋತ್ತಮ ಜಾರಕಿಹೊಳಿ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇತ್ತೀಚೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಿರಿಯ ಪತ್ರಕರ್ತರನ್ನೂ ಸನ್ಮಾನಿಸಲಾಯಿತು. 150 ಮಂದಿ ಹಿರಿಯ ಪತ್ರಿಕಾ ವಿತರಕರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೈಕಲ್ ಗಳನ್ನು ವಿತರಿಸಿದರು.
ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ತಂಡದ ಗಿರೀಶ್ ಕೋಟೆ, ಕೆ ಪಿ ಪುಟ್ಟಸ್ವಾಮಯ್ಯ, ದೀಪಕ್ ಕರಾಡೆ, ಕೆ ಎಸ್ ನಾಗರಾಜ್ ರವರಿಗೂ ಇದೇ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ