*JDS ಮತ್ತೊಂದು ವಿಕೇಟ್ ಪತನ; ಶಾಸಕ ಸ್ಥಾನಕ್ಕೆ ಎ.ಟಿ.ರಾಮಸ್ವಾಮಿ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ಶಾಸಕ ಎ.ಟಿ.ರಾಮಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸಭೆಯ ಸ್ಪೀಕರ್ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ್ದಾರೆ.

ರಾಜೀನಾಮೆ ಬಳಿಕ ಮಾತನಾಡಿದ ಎ.ಟಿ.ರಾಮಸ್ವಾಮಿ, ನಾನು ಸಂತೋಷದಿಂದ ರಾಜಿನಾಮೆ ಸಲ್ಲಿಸಿದ್ದೇನೆ. ಇಷ್ಟುದಿನ ಶಾಸಕನಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟ ಜೆಡಿಎಸ್ ಪಕ್ಷಕ್ಕೆ ಧನ್ಯವಾದ. ನಾನು ಪ್ರಾಮಾಣಿಕವಾಗಿ ಕೆಲಸವನ್ನು ಮಾಡಿರುವ ತೃಪ್ತಿ ನನಗಿದೆ. ನಾನು ವೈಯಕಿಕ ಹಿತಾಸಕ್ತಿಯಿಂದ ರಾಜಕೀಯ ಮಾಡಿಲ್ಲ. ನಾನು ಶಾಸಕನಾಗಿದ್ದಾಗ ಜನಪರ ಕೆಲಸ ಮಾಡಿದ್ದೇನೆ. ನಾನು ಜೆಡಿಎಸ್ ಬಿಡುವುದಾಗಿ ಎಲ್ಲೂ ಹೇಳಿಲ್ಲ, ಆದರೆ ಜೆಡಿಎಸ್ ನವರೇ ನನ್ನನ್ನು ಹೊರ ಹಾಕಿದರು. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದೇ ಮುಳುವಾಯಿತು ಎಂದು ಹೇಳಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button