ಪಾಲಿಕೆ ಆಯುಕ್ತರ ಮನೆ ಮುಂದೆ ಕಸ ತಂದು ಚೆಲ್ಲಿದ ಶಾಸಕ ಅಭಯ ಪಾಟೀಲ (ವಿಡೀಯೋ ಸಹಿತ ವರದಿ)
ಪ್ರತಿ ರವಿವಾರ ಆಯುಕ್ತರ ಮನೆ ಮುಂದೆ ಕಸ ತಂದು ಹಾಕುತ್ತೇನೆ -ಅಭಯ ಪಾಟೀಲ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನಗರದ ಸ್ವಚ್ಛತೆಯನ್ನು ಸರಿಯಾಗಿ ಮಾಡುತ್ತಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ತಾವೇ ಸ್ವತಃ ಬೆಂಬಲಿಗರೊಂದಿಗೆ ಕಸಗಳನ್ನು ಟ್ರ್ಯಾಕ್ಟರ್ ನಲ್ಲಿ ತುಂಬಿಕೊಂಡು ತಂದು ಮಹಾನಗರ ಪಾಲಿಕೆ ಆಯುಕ್ತರ ಮನೆ ಮುಂದೆ ಚೆಲ್ಲಿದ್ದಾರೆ.
ಇಂದು ಬೆಳಗ್ಗೆಯಿಂದಲೇ ಬೆಂಬಲಿಗರೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಂಡ ಅಭಯ ಪಾಟೀಲ, ಕಸ ತುಂಬಿಕೊಂಡು ಟ್ರ್ಯಾಕ್ಟರ್ ನಲ್ಲಿ ತುಂಬಿ ನೇರವಾಗಿ ತಾವೇ ಟ್ರ್ಟಾಕ್ಟರ್ ಚಲಾಯಿಸಿಕೊಂಡು ವಿಶ್ವೇಶ್ವರ ನಗರದಲ್ಲಿರುವ ಪಾಲಿಕೆ ಆಯುಕ್ತರ ಮನೆ ಮುಂದೆ ತಂದು ಚೆಲ್ಲಿದ್ದಾರೆ.
ಕಳೆದ ಹಲವಾರು ತಿಂಗಳಿನಿಂದ ಎಚ್ಚರಿಕೆ ನೀಡುತ್ತ ಬಂದಿದ್ದೇನೆ. ಸ್ವಚ್ಛ ಮಾಡದಿದ್ದರೆ ನಿಮ್ಮ ಮನೆಯ ಮುಂದೆ ಹಾಕುತ್ತೇನೆ ಎಂದೂ ಹೇಳಿದ್ದೆ. ಆದರೆ ಎಚ್ಚರಿಕೆಗೂ ಬಗ್ಗದ್ದರಿಂದ ಅವರ ಮನೆ ಮುಂದೆ ತಂದು ಹಾಕಿದ್ದೇನೆ. ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಪ್ರತಿ ರವಿವಾರ ಇಲ್ಲೇ ತಂದು ಹಾಕುತ್ತೇನೆ ಎಂದು ಅಭಯ ಪಾಟೀಲ ಎಚ್ಚರಿಕೆ ನೀಡಿದರು.
ಸಿಎಂ ಯಡಿಯೂರಪ್ಪ ನಾಳೆ ಎಲ್ಲೆಲ್ಲಿ ಭೇಟಿ ನೀಡಲಿದ್ದಾರೆ? ಇಲ್ಲಿದೆ ಸಮಗ್ರ ವಿವರ; ಜಿಲ್ಲೆಯಲ್ಲಿ 19,035 ಜನರ ರಕ್ಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ