
ಪ್ರಗತಿವಾಹಿನಿ ಸುದ್ದಿ; ಶಿರಸಿ: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರಿನ ಪುಲಕೇಶಿ ನಗರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಸಿಡಿದೆದ್ದಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿ ಸ್ಪೀಕರ್ ಕಾಗೇರಿಯವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇಡೀ ರಾಜ್ಯದಲ್ಲಿಯೇ ಅತೀ ಹೆಚ್ಚು ಮತ ಪಡೆದು ಆಯ್ಕೆಯಾಗಿರುವ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅಖಂಡ ಶ್ರೀನಿವಾಸ್ ಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಪಕ್ಷದಲ್ಲಿ ಅತೀ ಹೆಚ್ಚು ನೋವು ತಿಂದಿದ್ದೀನಿ. ಮೂರು ಬಾರಿಯ ಲಿಸ್ಟ್ ನಲ್ಲಿಯೂ ನನಗೆ ಟಿಕೇಟ್ ಅನೌನ್ಸ್ ಆಗಿಲ್ಲ. ಆದ್ದರಿಂದ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ಕ್ಷೇತ್ರದಲ್ಲಿ ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಎಲ್ಲರೂ ಒಟ್ಟಾಗಿಯೇ ಇದೀವಿ. ಯಾರದ್ದೋ ಮಾತನ್ನ ಕೇಳಿ ನನಗೆ ಅನ್ಯಾಯ ಮಾಡಿದ್ದಾರೆ. ನಮ್ಮ ಪಕ್ಷ ದ ಕೆಲವು ಹಿರಿಯ ನಾಯಕರು ನನ್ನ ಟಿಕೇಟ್ ಗೆ ಅಡ್ಡಿ ಮಾಡಿದ್ದಾರೆ. ನನಗೆ ಅನ್ಯಾಯ ಆಗಿದೆ. ಆದ್ರೂ ಅವರಿಗೆ ದೇವ್ರು ಒಳ್ಳೆಯದು ಮಾಡ್ಲಿ ಎಂದಿದ್ದಾರೆ.
ಯಾವುದೇ ಪಕ್ಷಕ್ಕೆ ಹೋಗುವ ತೀರ್ಮಾನ ಮಾಡಿಲ್ಲ. ಕ್ಷೇತ್ರದ ಜನರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ