
ಪ್ರಗತಿವಾಹಿನಿ ಸುದ್ದಿ, ಸವದತ್ತಿ – ಶಾಸಕ ಆನಂದ ಮಾಮನಿ ಮಂಗಳವಾರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದರು.
ಸವದತ್ತಿ ಹೂಲಿ ಕ್ರಾಸ್-ಮುನವಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಮುನವಳ್ಳಿಯ ಸೀತಾರಾಮ ಕ್ರಾಸ್ ಹತ್ತಿರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ಸಹಾಯಕ ಅಭಿಯಂತರೊಂದಿಗೆ ಪರಿಶೀಲಿಸಿದ ಶಾಸಕರು, ರಸ್ತೆಯ ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳದಂತೆ ಸೂಚಿಸಿದರು.
ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಪದೇ ಪದೆ ದುರಸ್ತಿಗೆ ಬಾರದಂತೆ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಕರೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ