Latest

ಅಮೀತ ಶಾ ಕಾರ್ಯಕ್ರಮಕ್ಕೆ 1 ಲಕ್ಷ ಜನ ನಿರೀಕ್ಷೆ: ಹಣಮಂತ ನಿರಾಣಿ

ಪ್ರಗತಿವಾಹಿನಿ ಸುದ್ದಿ, ಮುಧೋಳ – ನಿರಾಣಿ ಉದ್ಯಮ ಸಮೂಹದ ವಿವಿಧ ಕಾರ್ಖಾನೆಗಳ ಉದ್ಘಾಟನೆ ಹಾಗೂ ವಿಸ್ತರಣೆಯ ಭೂಮಿಪೂಜೆ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವರಾದ ಅಮೀತ ಶಾ ಆಗಮಿಸಲಿದ್ದು ಈ ಕಾರ್ಯಕ್ರಮದ ಸಿದ್ದತೆಗಳನ್ನು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದ ಕೇದಾರನಾಥ ಶುಗರ್ಸ್‌ನಲ್ಲಿ ಜ.೧೭ ರಂದು ಬೆಳಿಗ್ಗೆ ೧೦.೩೦ಕ್ಕೆ ಕಾರ್ಯಕ್ರಮವು ಜರುಗಲಿದ್ದು, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ನಳಿನಕುಮಾರ ಕಟೀಲ್ ಸೇರಿದಂತೆ ಸಚಿವರು ಹಾಗೂ ರಾಜ್ಯ ನಾಯಕರು ಭಾಗವಹಿಸುವರು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಬಾಗಲಕೋಟ, ಬೆಳಗಾವಿ, ವಿಜಯಪುರ ಹಾಗೂ ಗದಗ ಜಿಲ್ಲೆಗಳಿಂದ ೧ ಲಕ್ಷಕ್ಕೂ ಅಧಿಕ ರೈತರು ಭಾಗವಹಿಸಲಿದ್ದಾರೆ. ಕೊವಿಡ್-೧೯ಗೆ ಸಂಬಂಧಿಸಿದ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ವಹಿಸಲಾಗಿದೆ ಎಂದು ಹಣಮಂತ ನಿರಾಣಿ ತಿಳಿಸಿದ್ದಾರೆ.

Home add -Advt

Related Articles

Back to top button