ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಅನಿಲ್ ಬೆನಕೆ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.
2018ರ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಸಂಬಂಧ ಶಾಸಕ ಅನಿಲ್ ಬೆನಕೆ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಶಾಸಕರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಶಾಸಕರ ವಿರುದ್ಧ 5 ಬಾರಿ ವಾರೆಂಟ್ ಜಾರಿಯಾಗಿದ್ದರೂ ಕೋರ್ಟ್ ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರಿಗೆ ವಾರೆಂಟ್ ವೈಫಲ್ಯದ ಬಗ್ಗೆ ಕಾರಣ ತಿಸುವಂತೆ ನೋಟೀಸ್ ನೀಡಲಾಗಿದೆ. ಅಲ್ಲದೇ ಜೂನ್ 27ರಂದು ಶಾಸಕ ಅನಿಲ್ ಬೆನಕೆಯವರನ್ನು ಕೋರ್ಟ್ ಗೆ ಹಾಜರುಪಡಿಸುವಂತೆ ಸೂಚಿಸಿದೆ.
ಚಿಕ್ಕೋಡಿ: ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ