Latest

ಮರಾಠಾ ಸಮಾಜಕ್ಕೆ ಮೀಸಲಾತಿ ನೀಡದಿದ್ದರೆ ಚುನಾವಣೆ ಬಹಿಷ್ಕಾರ ಎಂದ ಶಾಸಕಿ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಮರಾಠಾ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ಇಲ್ಲವಾದಲ್ಲಿ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಶಾಸಕಿ ಅಂಜಲಿ ನಿಂಬಾಳ್ಕರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಧಾರವಾಡದಲ್ಲಿ ನಡೆದ ಮರಾಠಾ ಕ್ರಾಂತಿ ಮೋರ್ಚಾ ಸಭೆಯಲ್ಲಿ ಮಾತನಾಡಿದ ಅವರು, ನಮಗೆ ಮರಾಠಾ ಅಭಿವೃದ್ಧಿ ಪ್ರಾಧಿಕಾರ ಬೇಡ. ಮರಾಠ ಸಮಾಜದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದ್ದರೆ 2ಎ ಮೀಸಲಾತಿ ನೀಡಲಿ. ಇಲ್ಲವಾದಲ್ಲಿ ಮಸ್ಕಿ, ಬಸವಕಲ್ಯಾಣ ಉಪಚುನಾವಣೆ, ಬೆಳಗಾವಿ ಲೋಕಸಭಾ ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಹೇಳಿದರು.

Home add -Advt

ಈ ಬಗ್ಗೆ ನಾವು ಕೂಡ ಸಮಾಜದ ಮುಖಂಡರಿಗೆ ಪತ್ರ ಬರೆಯುತ್ತೇವೆ. 7 ದಿನಗಳ ಒಳಗಾಗಿ ಸರ್ಕಾರ ಈ ಬಗ್ಗೆ ನಿರ್ಣಯ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

 

Related Articles

Back to top button