ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಸಿಎಂ ಬಿಎಸ್ ವೈ ವಿರೋಧಿ ಬಣಗಳ ತಂತ್ರಗಾರಿಕೆ ಮುಂದುವರೆದಿದೆ ಎನ್ನಲಾಗಿದ್ದು, ಇದೀಗ ಶಾಸಕ ಅರವಿಂದ್ ಬೆಲ್ಲದ್ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ನವದೆಹಲಿಯ ಜಿಆರ್ ಜಿ ರಸ್ತೆಯಲ್ಲಿರುವ ನಿವಾಸದಲ್ಲಿ ಅರುಣ್ ಸಿಂಗ್ ಅವರನ್ನು ಭೇಟಿಯಾದ ಬೆಲ್ಲದ್, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ರಾಜ್ಯ ರಾಜಕೀಯ ಬೆಳವಣಿಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. 20 ನಿಮಿಷಗಳ ಕಾಲ ನಾಯಕರು ಮಾತುಕತೆ ನಡೆಸಿದ್ದು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಬೆಲ್ಲದ್ ನಿರಾಕರಿಸಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸ್ವತ: ಅರುಣ್ ಸಿಂಗ್ ಅವರೇ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟ ಪಡಿಸಿದ್ದರೂ ಕೂಡ ತೆರೆ ಮರೆಯಲ್ಲಿ ಬದಲಾವಣೆ ಯತ್ನ ನಡೆದಿದೆ ಎನ್ನಲಾಗಿದೆ. ಈ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪನವರೇ ಸ್ವತ: ತಾನು ಇನ್ನೂ ಎರಡು ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಘೋಷಿಸಿದ್ದರು ಈ ಬಗ್ಗೆ ವರಿಷ್ಠರು ಕೂಡ ತಿಳಿಸಿದ್ದಾರೆ ಎಂದಿದ್ದರು ಇದರ ಬೆನಲ್ಲೇ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ದೌಡಾಯಿಸಿದ್ದು, ವರಿಷ್ಠರ ಭೇಟಿ ಮಾಡಿ ಚರ್ಚೆಯಲ್ಲಿ ತೊಡಗಿರುವುದು ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನಕ್ಕೆ ಕಾರಣವಾಗಿದೆ.
ಹುಲಿಯನ್ನು ಜೀವಿತಾವಧಿ ದತ್ತು ಪಡೆದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ