Film & EntertainmentNational

*ನಟಿ ರನ್ಯಾ ರಾವ್ ಚಿನ್ನ ಸಾಗಾಟ ಕೇಸ್ ನಲ್ಲಿ ಸಿಬಿಐ ಎಂಟ್ರಿ*

ಪ್ರಗತಿವಾಹಿನಿ ಸುದ್ದಿ : ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ “ಮಾಣಿಕ್ಯ” ನಟಿ ರನ್ಯಾ ರಾವ್ ವಿರುದ್ಧ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದುಬೈನಿಂದ 14 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರು ಸದ್ಯ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸುತ್ತಿದ್ದು ಪೊಲೀಸ್ ವಿಚಾರಣೆಯ ವೇಳೆ ಈ ಹಿಂದೆ ದೊಡ್ಡ ಟೀಂ ಇದೆ ಎಂಬ ಸ್ಫೋಟಕ ವಿಷಯ ಬಾಯಿಬಿಟ್ಟಿದ್ದರು.

Home add -Advt

ಈ ಹಿನ್ನಲೆ ಪ್ರಕರಣವನ್ನು ಸಿಬಿಐ ಅಧಿಕಾರಿಗಳಿಗೆ ವಹಿಸಲಾಗಿದ್ದು, ಇದೀಗ ನಟಿಯ ವಿರುದ್ಧ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸದ್ಯ ಡಿ.ಆರ್.ಐ. ಅಧಿಕಾರಿಗಳು ನಟಿಯನ್ನು ವಶಕ್ಕೆ ಕೇಳದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.

Related Articles

Back to top button