Election NewsKannada NewsKarnataka NewsPolitics

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾವಚಿತ್ರ ಸುಟ್ಟು ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಧಾರವಾಡ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಸಮತಾ ಸೇನಾ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚುವ ಮೂಲಕ ಸಮತಾ ಸೇನಾ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Home add -Advt

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿಯಾದರೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಕೂಡಲೇ ಅವರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Related Articles

Back to top button