Kannada NewsKarnataka News
ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಅನಿಲ ಬೆನಕೆ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶಾಸಕ ಅನಿಲ ಬೆನಕೆ ಬೆಳಗಾವಿ ಹಳೆ ಪಿ. ಬಿ. ರೋಡ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಹಳೆ ಪಿ. ಬಿ. ರೋಡ್‌ನ ನಿವಾಸಿಗಳು ಹಾಗೂ ವ್ಯಾಪಾರಸ್ಥರು ರಸ್ತೆ ನಿರ್ಮಾಣ ಮಾಡುವ ಸಲುವಾಗಿ ಮನವಿ ಸಲ್ಲಿಸಿದ್ದರು. ಅವರ ಮನವಿಯಂತೆ ಇಂದು ರೈಲ್ವೆ ಅಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಅಧಿಕಾರಗಳ ಜೊತೆ ಚರ್ಚಿಸಿ ಹಳೆ ಪಿ. ಬಿ. ರೋಡ್ ನ ಜಿಜಾಮಾತಾ ಚೌಕದಿಂದ ದೊಡ್ಡಣ್ಣವರ ಕಾಂಪ್ಲೆಕ್ಸ್ ವರೆಗೆ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಂಡು ಚಾಲನೆ ನೀಡಲಾಗಿದೆ ಎಂದರು.
ರಸ್ತೆ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆದಾರರು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಮತ್ತು ಸ್ಥಳಿಯರ ಸಹಕಾರವನ್ನು ಪಡೆದುಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಶಾಸಕರೊಂದಿಗೆ ರೈಲ್ವೆ ಅಧಿಕಾರಿಗಳು, ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸ್ಥಳಿಯರು ಉಪಸ್ಥಿತರಿದ್ದರು.




