ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮರಾಠಾ ಸಮುದಾಯದ ಅಭಿವೃಧ್ದಿಗಾಗಿ ೫೦೦ ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಬುಧವಾರ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬೆನಕೆ, ಮರಾಠಾ ಸಮಾಜದ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃಧ್ದಿಗಾಗಿ ಹೆಚ್ಚುವರಿ ೫೦೦ ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.
ಮರಾಠಾ ಅಭಿವೃಧ್ದಿ ನಿಗಮ ಸ್ಥಾಪಿಸಿ ೫೦ ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿನ ೧೬ ಬೇರೆ ನಿಗಮಗಳ ಅಭಿವೃಧ್ದಿಗಾಗಿ ತಲಾ ೫೦೦ ಕೋಟಿ ಅನುದಾನವನ್ನು ಈ ಪ್ರಸಕ್ತ ೨೦೨೧-೨೨ ನೇ ಸಾಲಿನಲ್ಲಿ ಒದಗಿಸಲಾಗಿದೆ. ಮರಾಠಾ ಸಮುದಾಯವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವುದರಿಂದ ಸಮಾಜದ ಏಳಿಗೆಗಾಗಿ ಹೆಚ್ಚುವರಿ ೫೦೦ ಕೋಟಿ ಅನುದಾನವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ