ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿಯ ಕೆಲವು ನ್ಯಾಯವಾದಿಗಳು ಅನಿಲ ಮುಳವಾಡಮಠ ಅವರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಒತ್ತಡ ಆರಂಭಿಸಿದ್ದಾರೆ.
ಬುಧವಾರ ನಗರದ ಖಾಸಗಿ ಹೊಟೆಲ್ ನಲ್ಲಿ ಸಭೆ ನಡೆಸಿ, ಬಿಜೆಪಿ ಗ್ರಾಮೀಣ ಅಧ್ಯಕ್ಷ ವಿಶ್ವನಾಥ ಪಾಟೀಲ ಅವರಿಗೆ ಈ ಸಂಬಂಧ ಮನವಿ ಸಲ್ಲಿಸಿದ್ದಾರೆ.
ಸಂಸದ ಸುರೇಶ ಅಂಗಡಿ ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ಕೆಲಸ ಮಾಡಿಲ್ಲ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ನ್ಯಾಯವಾದಿಗಳ ಹಲವು ಕೋರಿಕೆಗಳಿಗೂ ಮನ್ನಣೆ ನೀಡಿಲ್ಲ ಎಂದು ಆರೋಪಿಸಿದ ವಕೀಲರು, ಮುಳವಾಡಮಠ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.
(ಪ್ರಗತಿವಾಹಿನಿ ಸುದ್ದಿಗಳನ್ನು ಇತರರಿಗೆ ಶೇರ್ ಮಾಡಿ)