Latest

ಬಿಜೆಪಿ ಶಾಸಕ ಸಿ.ಎಂ.ಉದಾಸಿ ವಿಧಿವಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಹಿರಿಯ ಶಾಸಕ, ಮಾಜಿ ಸಚಿವ ಸಿ.ಎಂ ಉದಾಸಿ (85) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಿ.ಎಂ ಉದಾಸಿ, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮಧ್ಯಾಹ್ನ 2:50ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪುತ್ರ ಶಿವಕುಮಾರ್ ಉದಾಸಿ ತಿಳಿಸಿದ್ದಾರೆ.

ಸಿ.ಎಂ.ಉದಾಸಿ ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದರು. 1994ರಲ್ಲಿ ಜೆ.ಹೆಚ್.ಪಟೇಲ್ ರ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿದ್ದರು. 2004ರಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಜವಳಿ ಸಚಿವರಾಗಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಾಳೆ ಸಿ.ಎಂ ಉದಾಸಿ ಅಂತ್ಯಕ್ರಿಯೆ ನಡೆಯಲಿದೆ

ಹಾವೇರಿ ಜಿಲ್ಲೆಯಲ್ಲಿ ವಿನೂತನ ಕಾರ್ಯಕ್ರಮ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button