Belagavi NewsBelgaum NewsKannada NewsKarnataka NewsPolitics

*ಶಾಸಕ ಚಂದ್ರು ಲಮಾಣಿ ಬಿಜೆಪಿಯಿಂದ ಅಮಾನತ್ತು..? ವರದಿ ಕೇಳಿದ ಹೈಕಮಾಂಡ್*

ಪ್ರಗತಿವಾಹಿನಿ ಸುದ್ದಿ: ಐದು ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದು ಬಂಧನವಾಗಿರುವ ಬಿಜೆಪಿ ಶಾಸಕ ಚಂದ್ರು ಲಮಾಣಿ ಪ್ರಕರಣ ಗಮನಿಸಿರುವ ಬಿಜೆಪಿ ಹೈಕಮಾಂಡ್ ವರದಿ ಕೇಳಿದೆ.

ರಾಜ್ಯ ಬಿಜೆಪಿಗೆ ಕೂಡಲೇ ವಿವರವಾಗಿ ವರದಿ ನೀಡುವಂತೆ ಸೂಚನೆ ನೀಡಿದೆ. ಸದ್ಯದಲ್ಲೇ ಚಂದ್ರು ಲಮಾಣಿಯನ್ನು ಪಕ್ಷದಿಂದ ಅಮಾನತು ಮಾಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಲೋಕಾಯುಕ್ತ ಅಧಿಕಾರಿಗಳು ಚಂದ್ರು ಲಮಾಣಿ ಸೇರಿ ಮೂವರನ್ನು ಬಂಧಿಸಿರುವ ಬಗ್ಗೆ ಹೆಚ್ಚಾಗಿ ಪ್ರತಿಕ್ರಿಯೆ ನೀಡಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ನಿರಾಕರಿಸಿದ್ದು ಪೂರ್ಣ ಮಾಹಿತಿ ಪಡೆದುಕೊಳ್ಳುವುದಾಗಿ ಹೇಳಿದರು.

ಇನ್ನು ಗದಗ ಲಕ್ಷ್ಮೇಶ್ವರ ಪಟ್ಟಣದಲ್ಲಿ ಚಂದ್ರು ಲಮಾಣಿ ಬಂಧನ ವಿಚಾರ ಖಂಡಿಸಿ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು. ರಾಜ್ಯ ಕಾಂಗ್ರೆಸ್‌ ಷಡ್ಯಂತ್ರದ ಭಾಗವಾಗಿ ಬಂಧಿಸಲಾಗಿದೆ ಎಂದು ಕಾರ್ಯಕರ್ತರು, ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button