ಶಾಸಕ, ಮಾಜಿ ಸಚಿವ ಮನಗೂಳಿ ನಿಧನ

ಪ್ರಗತಿವಾಹಿನಿ ಸುದ್ದಿ,ಬೆಂಗಳೂರು – ಶಾಸಕ, ಮಾಜಿ ಸಚಿವ ಎಂ.ಸಿ.ಮನಗೂಳಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಜೆಡಿಎಸ್ ಶಾಸಕರಾಗಿದ್ದ ಅವರು ಈ ಹಿಂದೆ ಜೆ.ಎಚ್.ಪಟೇಲ್ ಹಾಗೂ ಕುಮಾರಸ್ವಾಮಿ ಸರಕಾರದಲ್ಲಿ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ.9ರಂದು ಏರ್ ಲಿಫ್ಟ್ ಮೂಲಕ ಕಲಬುರಗಿ ವಿಮಾನ ನಿಲ್ದಾಣದಿಂದ ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ನಿಧನರಾದರು.

ಅವರಿಗೆ ಪತ್ನಿ, ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ.

 

Home add -Advt

Related Articles

Back to top button