
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿ ತಾಲೂಕಿನ ವಿವಿಧೆಡೆ ಅನಿಲ ಭಾಗ್ಯ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಿಲೆಂಡರ್ ಗಳನ್ನು ವಿತರಿಸಿದರು.

ಸರಕಾರದ ವಿವಿಧ ಯೋಜನೆಗಳನ್ನು ಕ್ಷೇತ್ರದ ಬಡವರಿಗೆ ಸರಿಯಾದ ರೀತಿಯಲ್ಲಿ ತಲುಪಿಸಲಾಗುತ್ತಿದೆ. ಜನರು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಜೊತೆಗೆ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಗಣೇಶ ಹುಕ್ಕೇರಿ ಈ ಸಂದರ್ಭದಲ್ಲಿ ಜನರಿಗೆ ಕರೆ ನೀಡಿದರು.