Kannada NewsKarnataka NewsNationalPolitics

*ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿದ್ದ ಶಾಸಕನ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆ*

ಪ್ರಗತಿವಾಹಿನಿ ಸುದ್ದಿ: ಸಚಿವ ಸ್ಥಾನಕ್ಕಾಗಿ ದೇಹಲಿ ಹೋಗಿದ್ದ ತಿಪಟೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದ ವೇಳೆ ಕರ್ನಾಟಕ ಭವನದಲ್ಲಿ ಅವರಿಗೆ ದಿಢೀರ್ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಅಲ್ಲಿಯೇ ಇದ್ದ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ಶಾಸಕ ಷಡಕ್ಷರಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 

Related Articles

Back to top button