
ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರಿಯ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಬಳಿ ನಡೆದಿದೆ.
ಶಾಸಕಿ ಕರೆಮ್ಮ ನಾಯಕ್ ಪುತ್ರಿ ಗೌರಿ ಅವರ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಪ್ರದೇಶ ಮೂಲದ ಕೋಮಿಶೆಟ್ಟಿ ಕೃಷ್ಣ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ದಾಖಲಿಸಲಾಗಿದೆ.
ದೇವದುರ್ಗ ತಾಲೂಕಿನ ಮಿಯ್ಯಾಪುರ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.