ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿನಿಂದ ನನ್ನ ತಾಯಿ ಪರಿಸ್ಥಿತಿ ಗಂಭೀರವಾಗಿದೆ. ಆದರೆ ಆಸ್ಪತ್ರೆಗಳು ಸೇರಿಸಿಕೊಳ್ಳುತ್ತಿಲ್ಲ ಎಂದು ಶಾಸಕಿ ಕುಸುಮಾ ಶಿವಳ್ಳಿ ಕಣ್ಣೀರಿಟ್ಟ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳ ಸಾವು ಪ್ರಕರಣದ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಸಭೆ ನಡೆಸಲಾಯಿತು. ಸಭೆಯಲ್ಲಿ ಶಾಸಕಿ ಕುಸುಮಾ ಶಿವಳ್ಳಿ ನನ್ನ ತಾಯಿ ಕೊರೊನಾ ಸೋಕಿನಿಂದ ಬಳಲುತ್ತಿದ್ದಾರೆ. ಆದರೆ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಮುಂದಾಗುತ್ತಿಲ್ಲ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೋಗಿ ಕೇಳಿದರೂ ನನ್ನ ತಾಯಿಯನ್ನು ದಾಖಲಿಸಿಕೊಂಡಿಲ್ಲ. ನನ್ನ ತಾಯಿ ಸ್ಥಿತಿ ಗಂಭೀರವಾಗುತ್ತಿದೆ ನನಗೆ ಆತಂಕವುಂಟಾಗುತ್ತಿದೆ ಎಂದು ಕಣ್ಣೀರಿಟ್ಟಿದ್ದಾರೆ.
ಈ ವೇಳೆ ಧೈರ್ಯ ತುಂಬಿದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್, ನಿಮ್ಮ ತಾಯಿಯನ್ನು ನಾವು ಆಸ್ಪತ್ರೆಗೆ ಸೇರಿಸುತ್ತೇವೆ ಎಂದು ಹೇಳಿದ್ದಾರೆ. ಅಲ್ಲದೆ ತಕ್ಷಣ ಹುಬ್ಬಳ್ಳಿ ಕಿಮ್ಸ್ ನಿರ್ದೇಶಕರಿಗೆ ಕರೆ ಮಾಡಿದ ಸಿದ್ದರಾಮಯ್ಯ ವೈದ್ಯರಿಗೆ ಬಿಸಿ ಮುಟ್ಟಿಸಿದ್ದಾರೆ.
ರಾಜ್ಯದಲ್ಲಿ ಜನಪ್ರತಿನಿಧಿಗಳದ್ದೇ ಈ ಪರಿಸ್ಥಿತಿಯಾದರೆ ಇನ್ನು ಕೊರೊನಾ ಸೋಂಕಿನಿಂದ ಬಳಲುತ್ತಿರುವ ಸಾಮಾನ್ಯ ಜನರ ಸ್ಥಿತಿಯೇನು?
ಸಿಎಂ ಯಡಿಯೂರಪ್ಪ, ಸಚಿವ ಸುಧಾಕರ್ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ